HomeCrimeಮಕ್ಕಳಾಗಿಲ್ಲ ಎಂದು ಮನೆಯವರಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆ

ಮಕ್ಕಳಾಗಿಲ್ಲ ಎಂದು ಮನೆಯವರಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾಗಿ 5 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಪತಿ ಹಾಗೂ ಮನೆಯವರು ನೀಡಿದ ಕಿರುಕುಳಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಲ್ಲಿ ನಡೆದಿದೆ.

ಅಶ್ವಿನಿ (31) ಆತ್ಮಹತ್ಯೆಗೆ ಶರಣಾದ ಮಹಿಳೆ. ಅಶ್ವಿನಿ ಹಾಗೂ ಅಭಿಷೇಕ್ ವಿವಾಹವಾಗಿ 5 ವರ್ಷಗಳಾಗಿತ್ತು. ಆದರೆ ದಂಪತಿಗೆ ಮಕ್ಕಳಿರಲಿಲ್ಲ. ಇದರಿಂದ ಪತಿ ಅಭಿಷೇಕ್ ಹಾಗೂ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಬೇಸತ್ತ ಮಹಿಳೆ ನೇಣಿಗೆ ಕೊರಳೊಡ್ದಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular