ಕಸ ವಿಲೇವಾರಿ ಮಾಡಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಘಟನೆಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಗಾಳಿಯಲ್ಲಿ ಹಾರಿ ಬಹಳ ದೂರ ಬಿದ್ದಿದ್ದಾರೆ.
ವರದಿಗಳ ಪ್ರಕಾರ ಸ್ಥಳೀಯ ನಿವಾಸಿಗಳು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು, ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮತ್ತೊಂದು ಆಸ್ರತ್ರೆಗೆ ರವಾನಿಸಲಾಯಿತು. ಸದ್ಯ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಮಹಿಳೆಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಅದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.
अमरोहा में दिल दहला देने वाला हादसा
तेज रफ्तार कार ने महिला को मारी टक्कर
भयावह टक्कर के बाद कई फीट दूर जा गिरी महिला
नेशनल हाईवे क्रॉस कर रही थी महिला
हादसे का दर्दनाक CCTV फुटेज आया सामने
आरोपी कार चालक की तलाश में जुटी पुलिस।@Uppolice #Amroha #RoadAccident #UttarPradsh pic.twitter.com/eRerUWDbsY— Roshan Kumar Journalist (@cameraman_r) September 10, 2024