HomeIndiaಪ್ರತಿದಿನ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆ ಈಗ ಮಿನಿಸ್ಟರ್

ಪ್ರತಿದಿನ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆ ಈಗ ಮಿನಿಸ್ಟರ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಗಿ ಬಿಜೆಪಿಯ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಿದ ಮೂರು ವಾರಗಳ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ.

ಪಕ್ಷದ 35 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಈ ಹಿಂದೆ ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮತ್ತು ಇತ್ತೀಚೆಗೆ ಶಾಸಕಿಯಾಗಿ ಆಯ್ಕೆಯಾಗಿದ್ದ ಕಲಿತಾ ಮಾಝಿ ಸಚಿವರಾಗಿದ್ದಾರೆ.

ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತೆ ಕಲಿತ ಮಾಝಿ ಅವರಿಗೆ 2021 ರಲ್ಲಿ ಬಿಜೆಪಿಯಿಂದ ಟಿಕೆಟ್ ಪ್ರಕಟಿಸಲಾಗಿತ್ತು. ಬರ್ಧಮಾನ್ ಜಿಲ್ಲೆಯ ಆಸುಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಲಿತಾ ಸೋಲು ಕಂಡಿದ್ದರು. 2026ರಲ್ಲಿ ಮತ್ತೆ ಅವರಿಗೆ ಅದೇ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಟಿಎಂಸಿ ಅಭ್ಯರ್ಥಿ ವಿರುದ್ಧ 12,535 ಮತಗಳ ಅಂತರದಿಂದ ಗೆಲುವು ಕಂಡು ಶಾಸಕಿಯಾಗಿ ಆಯ್ಕೆಯಾಗಿದ್ದ ಕಲಿತಾ ಮಾಝಿ ಅವರಿಗೆ ಈಗ ಸಚಿವ ಸ್ಥಾನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲ್ಕತ್ತಾದ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರ್.ಎನ್. ರವಿ ಪ್ರಮಾಣ ವಚನ ಬೋಧಿಸಿದ್ದಾರೆ. ಕೆಲವರು ಸಂಪುಟ ಸಚಿವರಾಗಿ, ಮತ್ತೆ ಕೆಲವರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಮೂಲಕ ಮಂತ್ರಿಮಂಡಲ ಸಾಮರ್ಥ್ಯ 41ಕ್ಕೆ ಏರಿಕೆಯಾಗಿದೆ. ಪೂರ್ವ ಬರ್ಧಮಾನ ಜಿಲ್ಲೆಯ ಆಸುಗ್ರಾಮ ಕ್ಷೇತ್ರದಿಂದ ಬಿಜೆಪಿ ಶಾಸಕಿ ಆಗಿರುವ ಕಲಿತಾ ಸಚಿವರಾಗಿದ್ದಾರೆ. ಅವರ ಪತಿ ಪ್ಲಂಬರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular