HomeLatest Newsಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದು; ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದು; ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಭುವನೇಶ್ವರ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟಮೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ.

ಸಂಬಲ್ಪುರ ಜಿಲ್ಲೆಯ ಬಮ್ರಾ ಬ್ಲಾಕ್‌ನ ಮಹುಲಿಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಗಿದಿಹಿ ಗ್ರಾಮದ ನಿವಾಸಿ ಸಂಜು ಮಡ್ಕಿ ಮೃತ ಮಹಿಳೆ. ಸಂಜು ಮಡ್ಕಿ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾಳೆ. ಬಳಿಕ ಸಂಜು ಮನೆಯಿಂದ ಪರಾರಿಯಾಗಿದ್ದಳು.

ಮಹಿಳೆಯ ಪತಿ ಮಹುಲಿಪಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ತನಿಖೆ ಚುರುಕುಗೊಂಡಿದೆ. ಪೊಲೀಸರು ಶೋಧಕಾರ್ಯ ನಡೆಸಿದಾಗ ಸಂಜು ಮಡ್ಕಿ ಮತ್ತೊಂದು ಹಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರು ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಘಟನೆಯ ಕುರಿತು ಮಾತನಾಡಿದ ಕುಚಿಂಡಾದ ಎಸ್‌ಡಿಪಿಒ ಪ್ರದೀಪ್ ಕುಮಾರ್ ದಾಶ್ ಈ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಒಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular