HomeUncategorizedಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿ ಶವವಾಗಿ ಪತ್ತೆ

ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿ ಶವವಾಗಿ ಪತ್ತೆ

ಮೈಸೂರು: ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.

ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ಪತಿಯೊಂದಿಗೆ ವಾಸವಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಧ್ಯಾ ಅವರನ್ನ ಟಿ.ಕೆ ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್‌ಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತು. ಇದೀಗ ಸಂಧ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಸಂಧ್ಯಾ ಪೋಷಕರು ಪತಿ ಅಕ್ಷಯ್ ಹಾಗೂ ಕುಟುಂಬದವರ ವಿರುದ್ಧ ಕಿರುಕುಳ ಹಾಗೂ ಕೊಲೆ ಆರೋಪ ಮಾಡಿದ್ದಾರೆ. ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular