ಬೆಂಗಳೂರು: ಮೂತ್ರ ವಿಸರ್ಜನೆಗೆಂದು ಚರಂಡಿ ಬಳಿ ಹೋದ ವ್ಯಕ್ತಿಗೆ ಮಹಿಳೆಯ ಶವ ಕಂಡು ದಂಗಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆ ಸುಮರು ೪೦ ವರ್ಷದವರು ಎನ್ನಲಾಗಿದೆ.
ದೇವನಹಳ್ಳಿ ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಕೋ ತಂಡದಿಂದ ಸ್ಥಳ ಪರಿಶೀಲನೆ ನಡೆಸಿ ಸದ್ಯ ಮೃತದೇಹವನ್ನು ದೇವನಹಳ್ಳಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಒಂದೆರಡು ದಿನದ ಹಿಂದೆ ಕೊಲೆ ಮಾಡಿರಬಹುದು. ಕೊಲೆ ಯಾರು ಮಾಡಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಸುತ್ತಾಮುತ್ತ ಸಿಸಿ ಕ್ಯಾಮರಾಗಳು ಇವೆ. ಎಲ್ಲವನ್ನೂ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುತ್ತೇವೆ ಎಂದು ಈಶಾನ್ಯ ವಿಭಾಗ ಡಿಸಿಪಿ ಮಿಥುನ್ ಕುಮಾರ್ ಹೇಳಿದ್ದಾರೆ.

