HomeCrimeBIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳೆಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಯಲಹಂಕದ ಮನೆಯೊಂದರಲ್ಲಿ ಪತ್ತೆಯಾಗಿದೆ.

ರೇಖಾ ಮೃತ ಮಹಿಳೆ. ಯಲಹಂಕ ಉಪನಗರದ 3ನೇ ಹಂತದ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ ಅಭಿರಾಮ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣ, ಒಡವೆ ಕೊಟ್ಟು ಅದ್ದೂರಿಯಾಗಿ ವಿವಾವಾಹ ಮಾಡಲಾಗಿತ್ತು. ಆದರೆ ಅಭಿರಾಮ್ ಪತ್ನಿ ರೇಖಾಗೆ ಮಾನಸಿಕ ಕಿರುಕುಳ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ರೇಖಾ ಕುಟುಂಬದವರು ಆರೋಪಿಸಿದ್ದಾರೆ. ಸೈಟ್ ವಿಚಾರವಾಗಿ ಪತ್ನಿಗೆ ಕಿರುಕುಳ ನೀಡಿದ್ದ ಎಂಬ ಆರೋಪವೂ ಕೇಳಿಬಂದಿದೆ.

ಇದೀಗ ಪತ್ನಿ ರೇಖಾ ಶವ ಮನೆಯಲ್ಲಿಯೇ ನೇಣುಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಅಭಿರಾಮ್ ವಿರುದ್ಧ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 304B, 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular