SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ ನಿರ್ಲಕ್ಷವೇ ಮಹಿಳೆ ಸಾವಿಗೆ ಕರಣ ಎಂದು ಕುಟುಂಬದವರು ಆರೋಪಿಸಿ, ಆಸ್ಪತ್ರೆ ಮುಂದೆ ಮಹಿಳೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಹೊಟ್ಟೆನೋವು ಎಂದು ನಾಜ್ನಿ ಆಸ್ಪತ್ರೆಗೆ ದಾಖಲಾಗಿದ್ದಳು. ಮಹಿಳೆಯ ಹೊಟ್ಟೆಯಲ್ಲಿ ಗಡ್ಡೆಯಾಗಿದ್ದು, ತಕ್ಷಣ ಆಪರೇಷನ್ ಮಾಡಬೇಕು ಎಂದು ವೈದ್ಯರು ಹೇಳಿದ್ದರು. ಆದರೆ ಎರಡು ದಿನಗಳಾದರೂ ಚಿಕಿತ್ಸೆ ನೀಡಿರಲಿಲ್ಲ. ನಿನ್ನೆ ಸಂಜೆ ನರದ ಸಮಸ್ಯೆ ಇದೆ. ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಆಂಬುಲೆನ್ಸ್ ನಲ್ಲಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆ ಸಾವನ್ನಪ್ಪಿದ್ದಾರೆ.

ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ ಮಾಡಿದ್ದೇ ಮಹಿಳೆ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಬಳಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read