HomeKarnatakaBIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

BIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಕುಮಟಾ: ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ನಡೆದಿದೆ.

ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಬಳಿಕ ಮಾಂಗಲ್ಯ ಸರ, ಕಾಲುಂಗುರಗಳನ್ನು ಸ್ಕೂಟಿಯೊಳಗೆ ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಸಮುದ್ರಕ್ಕೆ ಹಾರುತ್ತಿದ್ದಂತೆ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ತಕ್ಷಣ ಸಮುದ್ರಕ್ಕೆ ಇಳಿದು ಆಕೆಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಸಿಲುಕಿದ ಮಹಿಳೆ ಕಣ್ಮರೆಯಾಗಿದ್ದಾರೆ. ಮಹಿಳೆಗಾಗಿ ಸಮುದ್ರದಲ್ಲಿ ಶೋಧಕಾರ್ಯ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮುದ್ರದ ದಡದಲ್ಲಿ ನಿಂತು ಮಕ್ಕಳಿಬ್ಬರು ಕಣ್ಣೀರಿಟ್ಟಿದ್ದಾರೆ. ಮಹಿಳೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular