2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃಧ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸೇವಾ ಸಿಂಧೂ ಪೋರ್ಟಲ್ನಲ್ಲಿ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಕಡಿಮೆ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರಿಂದ ಅರ್ಜಿ ಸಲ್ಲಿಸಲು ಜನೆವರಿ 15, 2026 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

