ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ ವಿವಿಧ ಕಾರಣಗಳಿಂದ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಷರತ್ತು ಹಾಗೂ ನಿಬಂಧನೆಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ(ಡಿ.ಇ.ಒ) 1 ಹುದ್ದೆ, ಜಿಲ್ಲಾ ಬಾಲಭವನ ಜಿಲ್ಲಾ ಕಾರ್ಯಕ್ರಮ ಸಂಯೋಜಕರು 1 ಹುದ್ದೆ ಹಾಗೂ ಕಚೇರಿ ಸಹಾಯಕರ 1 ಹುದ್ದೆಯನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು. ಡಿಇಒ ಮತ್ತು ಸಹಾಯಕ ಕಾರ್ಯಕ್ರಮ ಅಧಿಕಾರಿ(ಪಿಎಂಎಂವಿವೈ) ಹುದ್ದೆಗೆ ಪದವಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನ, ಡಾಟಾ ಮ್ಯಾನೇಜ್ಮೆಂಟ್, ಸರ್ಕಾರಿ ಅಥವಾ ಸರ್ಕಾರೇತರ, ಐಟಿ ಆಧಾರಿತ ಸಂಸ್ಥೆಗಳೊಂದಿಗೆ ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ಡೇಟಾ ನಿರ್ವಹಣಾ ಪ್ರಕ್ರಿಯೆ ದಾಖಲೀಕರಣ ಮತ್ತು ವೆಬ್ ಆಧಾರಿತ ವರದಿ ತಯಾರಿಕೆಯಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು.
ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಮಾಹಿತಿ ಒದಗಿಸುವುದು ಅವಶ್ಯ.
ಕಚೇರಿ ಸಹಾಯಕರ ಹುದ್ದೆಗೆ ಪಿಯುಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅಂದು ಸಂಜೆ 5.30 ಗಂಟೆಯೊಳಗೆ ಅರ್ಜಿಗಳನ್ನು ಕಚೇರಿಗೆ ಸಲ್ಲಿಸಬೇಕು. ಮೂರು ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
