BIG NEWS : ಹೆಣ್ಣೆಂದರೆ ಸಹನೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ : ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಹೆಣ್ಣೆಂದರೆ ಸಹನೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಎಂದು ಸಿಎಂ ಸಿದ್ದರಾಮಯ್ಯ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಹೆಣ್ಣೆಂದರೆ ಸಹನೆ, ಸಹಿಷ್ಣುತೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಮೂರ್ತಿ. ತಾಯಾಗಿ ಜನ್ಮ ಕೊಟ್ಟು, ಸಹೋದರಿಯಾಗಿ ಸಲಹಿ, ಹೆಂಡತಿಯಾಗಿ ಜೊತೆನಿಂತು, ಮಗಳಾಗಿ ಪೊರೆಯುವವಳು ಹೆಣ್ಣು. ಅವಕಾಶ ದೊರೆತರೆ ಹೆಣ್ಣು ಏನೆಲ್ಲಾ ಸಾಧಿಸಬಲ್ಲಳು ಎಂಬುದು ಇಂದು ನಮ್ಮ ಕಣ್ಣ ಮುಂದಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಈ ಸಂದರ್ಭದಲ್ಲಿ ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು – ನೀವೆಲ್ಲರೂ ದನಿಗೂಡಿಸೋಣ. ನಾಡಿನ ಸಮಸ್ತ ಮಹಿಳೆಯರಿಗೆ ಮಹಿಳಾ ದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read