‘ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ’: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ. ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ ನಾಡಿನ ಕೋಟ್ಯಂತರ ಸ್ವಾಭಿಮಾನಿ ಮಹಿಳೆಯರ ಜೊತೆ ನಾವಿದ್ದೇವೆ. ನಮ್ಮ ಶಕ್ತಿ, ಗೃಹಲಕ್ಷ್ಮಿ, ಕೂಸಿನಮನೆ, ಯುವನಿಧಿ, ಗೃಹಜ್ಯೋತಿ ಯೋಜನೆಗಳು ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ  ಬಲತುಂಬಿ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿವೆ. ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು. ಲಿಂಗಾಧಾರಿತ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಮಹಿಳೆಯರ ಹೋರಾಟದಲ್ಲಿ ನಾವೆಲ್ಲರೂ ಜೊತೆಯಲ್ಲಿ ನಿಲ್ಲಬೇಕು.

ಅವಕಾಶಗಳಿಂದ ವಂಚಿತವಾಗಿರುವ ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಇದು ಬುದ್ಧ, ಬಸವಣ್ಣ, ಅಂಬೇಡ್ಕರರು ಸಾರಿದ ಸಮಸಮಾಜದ ಆಶಯ ಕೂಡ. ಈ ದಿಸೆಯಲ್ಲಿ ಪ್ರಯತ್ನಗಳು ಸಾಗಲಿ.

ನಮ್ಮ ಹಿಂದಿನ ಮತ್ತು ಇಂದಿನ ಸರ್ಕಾರದ ಅರ್ಧದಷ್ಟು ಯೋಜನೆಗಳು ಮಹಿಳಾ ಕೇಂದ್ರಿತವಾಗಿರುವುದನ್ನು ನಾಡು ಗಮನಿಸಿದೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿ, ಈ ದಿನದ ಆಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1765951169342423391

https://twitter.com/siddaramaiah/status/1765976360701563170

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read