HomeKarnatakaಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಬೆಂಗಳೂರು: ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ ತಗುಲಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಶಾಂಭವಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುವಾರ ಸ್ನಾನ ಮಾಡಿ ಕೆಲಸಕ್ಕೆ ಹೋಗುವ ಮೊದಲು ಹೇರ್ ಡ್ರೈಯರ್ ಮೂಲಕ ಕೂದಲು ಒಣಗಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಶಾಂಭವಿ ಅವರ ಕೂದಲಿಗೆ ತಾಗಿದ್ದು, ಅವರು ಆತಂಕದಿಂದ ಬೆಡ್ ಮೇಲೆ ಹೇರ್ ಡ್ರೈರ್ ಎಸೆದಿದ್ದಾರೆ. ಇದರ ಪರಿಣಾಮ ಪೀಠೋಪಕರಣಗಳು ಹಾಗೂ ಪಿಜಿಯಲ್ಲಿದ್ದ ಇತರೆ ವಸ್ತುಗಳಿಗೆ ಹಾನಿಯಾಗಿದೆ. ಶಾಂಭವಿ ಅವರ ನಿರ್ಲಕ್ಷ್ಯದಿಂದ ಪಿಜಿ ಪೀಠೋಪಕರಣಗಳಿಗೆ ಹಾನಿಯಾಗಿದೆ ಎಂದು ಮಾಲಿಕ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular