ಮಹಿಳಾ ಮೀಸಲಾತಿ ಮಸೂದೆಯ ವಿಚಾರವಾಗಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 1996ರಲ್ಲಿ ದೇವೇಗೌಡರ ಸರ್ಕಾರ ತಂದಿದ್ದ ಕ್ರಾಂತಿಕಾರಿ ನಿರ್ಧಾರವನ್ನು ಅಂದು ವಿಫಲಗೊಳಿಸಿದ್ದ ಕಾಂಗ್ರೆಸ್, ಇಂದು ಪ್ರಧಾನಿ ಮೋದಿ ಅವರ ಪ್ರಯತ್ನಕ್ಕೂ ತಡೆಯೊಡ್ಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಮೂರು ದಶಕಗಳು ಕಳೆದರೂ ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆ ಬದಲಾಗಿಲ್ಲ ಎಂದು ಆಪಾದಿಸಿರುವ ಅವರು, ಇದು ದೇಶದ ನಾರಿಶಕ್ತಿಗೆ ಮಾಡಿರುವ ಅಪಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ನಲ್ಲೇನಿದೆ…>?
ಟ್ವೀಟ್ 1 : 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ @INCIndiaಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು. ಅಂದು: ಶ್ರೀ@H_D_Devegowdaಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ಶ್ರೀ
@narendramodiಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ. ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ. ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದಿದ್ದಾರೆ.
ಟ್ವೀಟ್ 2 : ಭಾರತದ ಪ್ರಜಾಪ್ರಭುತ್ವದ ಭವಿಷ್ಯವನ್ನು ಮರು ವ್ಯಾಖ್ಯಾನಿಸುವ ಕ್ರಾಂತಿಕಾರಕ ಸುಧಾರಣೆಯಾದ ಮಹಿಳಾ ಮೀಸಲಾತಿ ಬಗ್ಗೆ ಮಾತಾಡುವ ಸೌಭಾಗ್ಯ ನನ್ನದಾಯಿತು. ಗೌರವಾನ್ವಿತ ಪ್ರಧಾನಿಗಳಾದ ಶ್ರೀ@narendramodiಅವರ ನಿರ್ಣಾಯಕ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ದಶಕಗಳ ವಿಳಂಬವನ್ನು ಸರಿಪಡಿಸುತ್ತಿದೆ ಹಾಗೂ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಸಬಲೀಕರಣವನ್ನು ಸಾಕ್ಷಾತ್ಕರಿಸುತ್ತಿದೆ. ನನಗೆ ಈ ಕ್ಷಣವು ಭಾವನಾತ್ಮಕ ಮತ್ತು ರಾಜಕೀಯವಾಗಿ ಅತ್ಯಂತ ಮಹತ್ವದ್ದಾಗಿದ್ದು, 1996ರಲ್ಲಿ ಅಂದಿನ ಪ್ರಧಾನಿಗಳಾಗಿದ್ದ ಶ್ರೀ@H_D_Devegowda ಅವರು ಮೊತ್ತ ಮೊದಲ ಬಾರಿಗೆ ಕನಸು ಕಂಡು ಮಹಿಳೆಯರಿಗೆ ಶೇ.33ರಷ್ಟು ಮೀಸಲು ನೀಡುವ ನಿರ್ಧಾರ ಕೈಗೊಂಡಿದ್ದರು. ಆದರೆ, ರಾಜಕೀಯ ಬೆಂಬಲ ಸಿಗದೇ ಅವರು ಯಶಸ್ಸು ಕಾಣಲಿಲ್ಲ. ಈಗ ಮಾನ್ಯ ಪ್ರಧಾನಿಗಳ ನಾಯಕತ್ವದಲ್ಲಿ ‘ನಾರಿಭಾರತ’ ಅವಿರ್ಭವಿಸುವ ಸುಸಮಯ ಬಂದಿದೆ. ಭಾರತವು ಶ್ರೀ ಮೋದಿ ಅವರ ನಾಯಕತ್ವದಲ್ಲಿ ಪರಿವರ್ತನಾತ್ಮಕ ಸುಧಾರಣೆಗೆ ಸಾಕ್ಷಿಯಾಗುತ್ತಿದ್ದು, ಹೊಸ ಮನ್ವಂತರಕ್ಕೆ ತೆರೆದುಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

