ಮಹಿಳಾ ಟಿ-20 ಏಷ್ಯಾ ಕಪ್; ಇಂದು ನಾಲ್ಕನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶ

ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ನ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಭಾರತದ ಬೌಲಿಂಗ್ ದಾಳಿಗೆ ಪಾಕಿಸ್ತಾನ ತಂಡ ತತ್ತರಿಸಿ ಹೋಗಿದೆ. ಮಹಿಳಾ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ uae ತಂಡವನ್ನು ಎದುರಿಸಲಿದೆ.

ಇಂದು ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ನ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ತನ್ನ ಓಂ ಗ್ರೌಂಡ್ ನಲ್ಲಿ ಬಾಂಗ್ಲಾದೇಶದೊಂದಿಗೆ ಕಾದಾಡಲು ಸಜ್ಜಾಗಿದೆ. ಉಭಯ ತಂಡಗಳು ಬಲಿಷ್ಠವಾಗಿದ್ದು, ಡಾಂಬಲ್ಲಾದಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಮಲೇಶಿಯಾ ಹಾಗೂ ಥೈಲ್ಯಾಂಡ್ ಮುಖಾಮುಖಿಯಾಗಲಿವೆ.  ಒಟ್ಟಾರೆ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಭರ್ಜರಿ ಮನರಂಜನೆ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read