HomeLive Newsಮಹಿಳಾ ಟಿ20 ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ ಟ್ವೆಂಟಿ...

ಮಹಿಳಾ ಟಿ20 ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ

ಏಕದಿನ ಸರಣಿ ಹಾಗೂ ಟೆಸ್ಟ್ನಲ್ಲಿ ಹೀನಾಯ ಸೋಲನುಭವಿಸಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಟಿ ಟ್ವೆಂಟಿ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಿದೆ. ಮೊನ್ನೆ ಅಷ್ಟೇ ಚೆನ್ನೈನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ಎದುರು ಕೇವಲ 12 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ.

ಇಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು,  ಮಹಿಳಾ ಭಾರತ ತಂಡಕ್ಕೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಜಯಭೇರಿಯಾದರೆ ಸರಣಿಯನ್ನು ಸಮ ಬಲಗೊಳಿಸಬಹುದಾಗಿದೆ.

ಇನ್ನೂ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯವನ್ನು ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಒಟ್ಟಾರೆ  ಉಭಯ ತಂಡಗಳ ನಡುವೆ ಇಂದು ಭರ್ಜರಿ ಹೋರಾಟ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular