ಮಹಿಳಾ ಟಿ ಟ್ವೆಂಟಿ ಸರಣಿ; ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನೆನ್ನೆ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಮಹಿಳಾ  ಭಾರತ ತಂಡ 9 ವಿಕೆಟ್ ಗಳಿಂದ ಜಯಭೇರಿಯಾಗುವ ಮೂಲಕ ಶುಭಾರಂಭ ಮಾಡಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ ಆಸ್ಟ್ರೇಲಿಯಾ ತಂಡಕ್ಕೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ  1-0  ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಶಫಾಲಿವರ್ಮ ಹಾಗೂ ಸ್ಮೃತಿ ಮಂದನ ಅರ್ಧಶತಕ ಸಿಡಿಸಿದರೆ ಯುವ ಆಟಗಾರ್ತಿ ಟೆಟಾಸ್ ಸಾಧು ನಾಲ್ಕು ವಿಕೆಟ್ ಪಡೆದುಕೊಂಡಿದ್ದಾರೆ.

ನಾಳೆ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ ನಡೆಯಲಿದ್ದು, ಮಹಿಳಾ ಭಾರತ ತಂಡ ಈ ಪಂದ್ಯವನ್ನು ಗೆದ್ದು ಸರಣಿ ಕೈ ವಶಪಡಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಈ ಪಂದ್ಯ 2 ತಂಡಕ್ಕೂ ತುಂಬಾ ಮುಖ್ಯವಾಗಿದ್ದು, ಅಪಾರ ಸಂಖ್ಯೆಯ ಪ್ರೇಕ್ಷಕರು ಸೇರಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read