ವರ್ಕ್​ ಫ್ರಂ ಸಿನಿಮಾ ಹಾಲ್​…….! ಬೆಂಗಳೂರಿಗನ ಈ ಕಾರ್ಯಕ್ಕೆ ನೆಟ್ಟಿಗರು ಸುಸ್ತು

ಬೆಂಗಳೂರು: ಕೋವಿಡ್​ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುವುದು ಸಾಮಾನ್ಯವಾಗಿದೆ. ಅಂದಿನಿಂದ, ಮದುವೆ ಮಂಟಪಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಅಸಾಮಾನ್ಯ ಸ್ಥಳಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇದೀಗ ಬೆಂಗಳೂರಿನ ಚಿತ್ರಮಂದಿರದಲ್ಲಿ ಕುಳಿತು ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು @bangalore.malayalis ಅವರು Instagram ನಲ್ಲಿ ಹಂಚಿಕೊಂಡಿದ್ದು, “ನೀವು ಎಲ್ಲವನ್ನೂ ನೋಡಿದ್ದೀರಿ ಎಂದು ನೀವು ಭಾವಿಸಿದಾಗ, ಬೆಂಗಳೂರಿಗೆ ಹೊಸತೊಂದು ಸಿಕ್ಕಿದೆ” ಎಂದು ಶೀರ್ಷಿಕೆ ನೀಡಲಾಗಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ತನ್ನ ಲ್ಯಾಪ್‌ಟಾಪ್‌ನಲ್ಲಿ ಚಲನಚಿತ್ರ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡಬಹುದು. ಸಿನಿಮಾ ಇನ್ನೂ ಶುರುವಾಗುವ ಮುನ್ನ ಕೆಲಸ ಶುರು ಮಾಡಿದ್ದಾನೆ. ಇದನ್ನು ನೋಡಿ ನೆಟ್ಟಿಗರು ಥರೇವಾರಿ ಕಮೆಂಟ್​ ಹಾಕುತ್ತಿದ್ದಾರೆ.

https://www.youtube.com/watch?v=X3jjLLwCAw4

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read