HomeKarnatakaನಮ್ಮ ಮೆಟ್ರೋ ಪಿಲ್ಲರ್ ಬಳಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ನಮ್ಮ ಮೆಟ್ರೋ ಪಿಲ್ಲರ್ ಬಳಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್ ಗಳಿಗೆ ಬೆಳಕಿನ ವ್ಯವಸ್ಥೆಗಾಗಿ ಲೈಟಿಂಗ್ ಅಳವಡಿಸುವ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಮೃತರನ್ನು ಎಂಆರ್ ಎಲೆಕ್ಟ್ರಿಕಲ್ ಸಂಸ್ಥೆಯ ಗುತ್ತಿಗೆ ಕಾರ್ಮಿಕ ಗುರಪ್ಪ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಟ್ರಿನಿಟಿ ಮೆಟ್ರೋ ನಿಲ್ದಾಣ ಹೊರ ಭಾಗದ ಪಿಲ್ಲರ್ ಸಂಖ್ಯೆ 153ರ ಸಮೀಪ ನೆಲದಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕಾರ್ಮಿಕ ಗುರಪ್ಪ ಅವರಿಗೆ ವಿದ್ಯುತ್ ಪ್ರವಹಿಸಿ ತೀವ್ರ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸೇಂಟ್ ಫಿಲೋಮಿನ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular