HomeKarnatakaಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್: ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ

ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್: ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ 35,000 ರೂ. ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular