HomeKarnatakaಕಾರ್ಮಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ, ಔಷಧ ವಿತರಣೆಗೆ ‘ಸ್ಮಾರ್ಟ್ ಆಂಬುಲೆನ್ಸ್’

ಕಾರ್ಮಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ, ಔಷಧ ವಿತರಣೆಗೆ ‘ಸ್ಮಾರ್ಟ್ ಆಂಬುಲೆನ್ಸ್’

ಕಡೂರು: 20 ಲಕ್ಷ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಸುಳ್ಳು ದಾಖಲೆ ನೀಡಿರುವ ನಕಲಿ ಕಟ್ಟಡ ಕಾರ್ಮಿಕರನ್ನು ಅಂಬೇಡ್ಕರ್ ಸೇವಾ ಕೇಂದ್ರದ ಮೂಲಕ ಗುರುತಿಸಿ ಅಂತಹವರ ಕಾರ್ಡುಗಳನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 58 ಲಕ್ಷ ಕಾರ್ಡುಗಳ ಪೈಕಿ 20 ಲಕ್ಷ ಕಾರ್ಡ್ ತೆಗೆದು ಹಾಕಲಾಗಿದೆ ಎಂದ ಸಚಿವರು ಮೊಬೈಲ್ ಮೆಡಿಕಲ್ಸ್ ಯೂನಿಟ್ ಯೋಜನೆಯಡಿ ರಾಜ್ಯದಾದ್ಯಂತ 100 ಆಂಬುಲೆನ್ಸ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ಕನಿಷ್ಠ ಮೂರು ಸ್ಮಾರ್ಟ್ ಆಂಬುಲೆನ್ಸ್ ಸಿಗಲಿದೆ. ಕಾರ್ಮಿಕರ ಮನೆ ಬಾಗಿಲಿಗೆ ತೆರಳಿ ಅವರ ಆರೋಗ್ಯ ತಪಾಸಣೆ ನಡೆಸಿ ಔಷಧ ವಿತರಣೆ ಮಾಡುವ ಗುರಿ ಗೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular