ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 ಲಕ್ಷ ರೂ.ನಲ್ಲಿ 2 ಲಕ್ಷ ಅಪಘಾತ ವಿಮೆ, 2 ಲಕ್ಷ ರೂಪಾಯಿ ಜೀವವಿಮೆ ಆಗಿರುತ್ತದೆ. ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಇ- ಕಾಮರ್ಸ್ ವಲಯಗಳಾದ ಜೋಮ್ಯಾಟೋ, ಅಮೆಜಾನ್ ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮೊದಲಾದವುಗಳಲ್ಲಿ ಕೆಲಸ ಮಾಡುವ ಇ- ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ಕಲ್ಪಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಈ ವಿಮಾ ಯೋಜನೆ ಜಾರಿ ಘೋಷಣೆ ಮಾಡಿದ್ದರು. ಮಾರ್ಗಸೂಚಿ ನಿಗದಿಗೊಳಿಸಿ ಯೋಜನೆ ಜಾರಿಯಾಗಲಿದ್ದು, ರಾಜ್ಯಾದ್ಯಂತ ಎಲ್ಲಾ ಪ್ರದೇಶಗಳಿಗೆ ಅನ್ವಯವಾಗಲಿದೆ.

ಸೇವಾಸಿಂದು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕು. 18 ರಿಂದ 60 ವರ್ಷದ ಎಲ್ಲಾ ಕಾರ್ಮಿಕರಿಗೆ ಯೋಜನೆ ಸೌಲಭ್ಯ ಸಿಗಲಿದೆ. ಇಪಿಎಫ್, ಇಎಸ್ಐ ಸೌಲಭ್ಯ ಹೊಂದಿರಬಾರದು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಉದ್ಯೋಗದಾತರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ, ಗುರುತಿನ ಚೀಟಿ, ಆಧಾರ್ ಸಂಖ್ಯೆ ಮೊದಲಾದ ದಾಖಲೆ ನೀಡಿ ಅರ್ಜಿ ಸಲ್ಲಿಸಬೇಕಿದೆ. ಅವಘಡ ಸಂಭವಿಸಿದ ಸಂದರ್ಭದಲ್ಲಿ ವಿಮೆ ಸೌಲಭ್ಯ ಸಿಗಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read