HomeKarnatakaಕೃಷಿ ಕಾರ್ಮಿಕರು ಸೇರಿ ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ: ಕೇಂದ್ರಕ್ಕೆ ನೋಟಿಸ್ ಜಾರಿಗೆ...

ಕೃಷಿ ಕಾರ್ಮಿಕರು ಸೇರಿ ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ: ಕೇಂದ್ರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೃಷಿ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರ ಕನಿಷ್ಠ ವೇತನ 7 ವರ್ಷಗಳಿಂದ ಪರಿಷ್ಕರಿಸಿಲ್ಲ ಎಂದು ಅಕ್ಷೇಪಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಆಲ್ ಇಂಡಿಯಾ ಸೆಂಟ್ರಲ್ ಯೂನಿಯನ್ ಆಫ್ ಟ್ರೇಡ್ ಕೌನ್ಸಿಲ್(ಎಐಸಿಟಿಯು) ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿಂದ ಏಕ ಸದಸ್ಯ ಪೀಠದಲ್ಲಿ ಬುಧವಾರ ನಡೆದಿದ್ದು, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಲಾಗಿದೆ.

ಅರ್ಜಿದಾರರ ಪರ ವಕೀಲರಾದ ಮೈತ್ರೇಯಿ ಕೃಷ್ಣನ್ ವಾದ ಮಂಡಿಸಿದ್ದಾರೆ. ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಮುಖ್ಯ ಕಾರ್ಮಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದು, ವಿಚಾರಣೆಯನ್ನು ಮಾರ್ಚ್ 10ಕ್ಕೆ ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ಕಾರ್ಮಿಕರು, ಇತರೆ ಗಣಿಗಾರಿಕೆ, ಕಟ್ಟಡ, ರಸ್ತೆ ನಿರ್ಮಾಣ, ನಿರ್ವಹಣೆ, ಕಲ್ಲು ಗಣಿಗಾರಿಕೆ, ಸ್ವೀಪಿಂಗ್, ಕ್ಲೀನಿಂಗ್, ಲೋಡಿಂಗ್ ಸೇರಿ ವಿವಿಧ ವಲಯದ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರ ಕನಿಷ್ಠ ವೇತನವನ್ನು 7 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕನಿಷ್ಠ ವೇತನವನ್ನು ಪ್ರತಿ 5 ವರ್ಷಕ್ಕೊಮ್ಮೆ ಪರಿಷ್ಕರಿಸಬೇಕು. ಸುಪ್ರೀಂ ಕೋರ್ಟ್ ಮಾನದಂಡಗಳಿಗೆ ಅನುಗುಣವಾಗಿ ಕನಿಷ್ಠ ವೇತನ ಪರಿಷ್ಕರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular