HomeKarnatakaಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ.

ಈಗ ಎಲ್ಲಾ 25,000 ಪೌರಕಾರ್ಮಿಕರ ಸೇವೆ ಕಾಯಂಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪೌರಕಾರ್ಮಿಕರ ಜೊತೆಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಕಾರ್ಮಿಕರಿಗೆ 10 ಲಕ್ಷ ರೂ. ವರೆಗೆ ವಿಮೆ, ವಿಶೇಷ ಭತ್ಯೆ, ಎಲ್ಲಾ ಕಾರ್ಮಿಕರಿಗೆ ಮನೆ ಹಂಚಿಕೆ ಮಾಡಲಾಗುವುದು. ಎಲ್ಲಾ 25000 ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular