HomeKarnatakaಕಾರ್ಮಿಕರಿಗೆ ಗುಡ್ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ

ಕಾರ್ಮಿಕರಿಗೆ ಗುಡ್ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ

ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular