HomeLatest Newsಕಾರ್ಮಿಕರೇ ಗಮನಿಸಿ: ಜ. 28ರಿಂದ ಸಿಟಿಜನ್ ಲಾಗಿನ್ ಸ್ಥಗಿತ, ಯೂನಿಯನ್ ಮಾಡ್ಯೂಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಕೆ...

ಕಾರ್ಮಿಕರೇ ಗಮನಿಸಿ: ಜ. 28ರಿಂದ ಸಿಟಿಜನ್ ಲಾಗಿನ್ ಸ್ಥಗಿತ, ಯೂನಿಯನ್ ಮಾಡ್ಯೂಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಕಾರ್ಮಿಕ ಸಂಘಗಳಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ ಸಲ್ಲಿಸುವ ಸಿಟಿಜನ್ ಲಾಗಿನ್ ಅನ್ನು ಜನವರಿ 28ರಿಂದ ಸ್ಥಗಿತಗೊಳಿಸಲಾಗುವುದು.

ಇನ್ನು ಮುಂದೆ ನೋಂದಣಿ, ನವೀಕರಣ, ಸೌಲಭ್ಯಗಳಿಗೆ ಯೂನಿಯನ್ ಮಾಡ್ಯೂಲ್ ತಂತ್ರಾಂಶದ ಮೂಲಕವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ತಿಳಿಸಿದೆ.

ವೃತ್ತಿ ಸಂಘಗಳ ಕಾಯ್ದೆ 1926ರ ಅಡಿ ನೋಂದಣಿಯಾದ ಕಾರ್ಮಿಕ ಸಂಘಗಳು ಡಾ. ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರಗಳ ತಂತ್ರಾಂಶದಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕರನ್ನು ಫಲಾನುಭವಿಗಳಾಗಿ ನೋಂದಣಿ ನವೀಕರಣಕ್ಕೆ ಕಾರ್ಮಿಕ ಸಂಘಗಳಿಗೆ ಯೂನಿಯನ್ ಮಾಡ್ಯೂಲ್ ವಿನ್ಯಾಸಗೊಳಿಸಲಾಗಿದೆ. ಇದರ ಮೂಲಕವೇ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular