ಬೆಂಗಳೂರು: ಸಾಸ್ಮೋಸ್ ಹೆಚ್ ಇಟಿ ಕಂಪನಿಯ 50ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಕಂಪನಿಯಲ್ಲಿ ಊಟ ಸೇವಿಸಿದ ಬಳಿಕ ಕಾರ್ಮಿಕರು ವಾಂತಿ-ಬೇಧಿಯಿಂದ ಬಳಲುತ್ತಿದ್ದು ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ಫುಡ್ ಪಾಯಿಸನ್ ನಿಂದ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ಅಸ್ವಸ್ಥ ಕಾರ್ಮಿಕರನ್ನು ದೇವನಹಳ್ಳಿಯ ಮಾನಸಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

