HomeKarnatakaಬಿಜೆಪಿ ಅಭ್ಯರ್ಥಿ ಪರ ಕೆಲಸ: ಕಾಂಗ್ರೆಸ್ ನಿಂದ ಆರು ವರ್ಷ ಉಚ್ಚಾಟನೆ

ಬಿಜೆಪಿ ಅಭ್ಯರ್ಥಿ ಪರ ಕೆಲಸ: ಕಾಂಗ್ರೆಸ್ ನಿಂದ ಆರು ವರ್ಷ ಉಚ್ಚಾಟನೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಛಾಟನೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದಲ್ಲದೆ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್ ಆಗಲು ಜಗದೀಶ್ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆರು ವರ್ಷಗಳ ಅವಧಿಗೆ ಎಸ್.ಎಂ. ಜಗದೀಶ್ ಅವರನ್ನು ಉಚ್ಚಾಟನೆ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular