ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ. 16ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುವುದು. ಅಧಿವೇಶನ ನಡೆಯುವಾಗ ಬೆಳಗ್ಗೆ 8 ರಿಂದ 9 ಗಂಟೆಯವರೆಗೆ ವಿಧಾನಸಭೆ ಸದಸ್ಯರಿಗೆ ಲಘು ಉಪಹಾರ ವ್ಯವಸ್ಥೆ ಮಾಡಲಾಗುವುದು. ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟೆಲ್ ಗಳಿಂದ ರುಚಿಕರ, ಆರೋಗ್ಯಕರ ಊಟ ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read