HomeLatest Newsಕ್ರಿಕೆಟ್ ಪ್ರೇಮಿಗಳಿಗೆ BMRCL ಗುಡ್ ನ್ಯೂಸ್: ವಿಶ್ವಕಪ್ ಪಂದ್ಯ ನಡೆವ ದಿನಗಳಂದು ಮೆಟ್ರೋ ವಿಶೇಷ ಟಿಕೆಟ್...

ಕ್ರಿಕೆಟ್ ಪ್ರೇಮಿಗಳಿಗೆ BMRCL ಗುಡ್ ನ್ಯೂಸ್: ವಿಶ್ವಕಪ್ ಪಂದ್ಯ ನಡೆವ ದಿನಗಳಂದು ಮೆಟ್ರೋ ವಿಶೇಷ ಟಿಕೆಟ್ ಸೌಲಭ್ಯ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್ ಪಂದ್ಯಗಳು ನಡೆಯುವ ದಿನಗಳಂದು ಅಭಿಮಾನಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮೆಟ್ರೋ ಟಿಕೆಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಶ್ವಕಪ್ ಪಂದ್ಯಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 20, 26, ನವೆಂಬರ್ 4, 9, 12 ರಂದು ಪಂದ್ಯ ನಡೆಯುವ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸದಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರುವ ಮತ್ತು ಹೋಗುವ ಪ್ರಯಾಣಕ್ಕೆ ಬಿಎಂಆರ್‌ಸಿಎಲ್ 50 ರೂ. ನಿಗದಿಪಡಿಸಿದೆ. ಕ್ರಿಕೆಟ್ ಪಂದ್ಯದ ದಿನದಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿಯೂ ಪೇಪರ್ ಟಿಕೆಟ್ ಲಭ್ಯವಿರಲಿದೆ. ಪೇಪರ್ ಕಾರ್ಡ್ ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್.ಸಿ.ಎಂ.ಸಿ. ವ್ಯವಸ್ಥೆಯನ್ನು ಪ್ರಯಾಣಿಕರು ಉಪಯೋಗಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular