ವಿಶ್ವಕಪ್ ಫೈನಲ್: ಟೀಂ ಇಂಡಿಯಾ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಬೆಂಗಳೂರು: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ -ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ಆಸ್ಟ್ರೇಲಿಯಾ ಎದುರಿಸುತ್ತಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ನನ್ನಂತಹ 140 ಕೋಟಿ ಭಾರತೀಯರ ಹರಕೆ ಹಾರೈಕೆ ನಿಮ್ಮೊಂದಿಗಿದೆ. ಗೆಲುವಿನ ಅಭಿಯಾನ ಮುಂದುವರೆಯಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

https://twitter.com/CMofKarnataka/status/1725876586761867349

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read