HomeKarnatakaಇಂದು ವಿಶ್ವಕಪ್ ಫೈನಲ್ ಪಂದ್ಯ : ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ...

ಇಂದು ವಿಶ್ವಕಪ್ ಫೈನಲ್ ಪಂದ್ಯ : ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ಕ್ರಿಕೆಟ್ ಅಭಿಮಾನಿಗಳಿಗೆ ರಾಜ್ಯ  ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಿನಾಂಕ: 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ  ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು. ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular