BIG NEWS: ಸುವರ್ಣಸೌಧದಲ್ಲಿ ‘ವಿಶ್ವದ ಮೊದಲ ಸಂಸತ್ತು’ ಖ್ಯಾತಿಯ ‘ಅನುಭವ ಮಂಟಪ’ದ ಬೃಹತ್ ತೈಲವರ್ಣ ಕಲಾಕೃತಿ ಅನಾವರಣ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಸನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪ’ದ ಬೃಹತ್ ತೈಲವರ್ಣ ಕಲಾಕೃತಿಯನ್ನು ಅನಾವರಣಗೊಳಿಸಿದರು.

ಸುವರ್ಣ ಸೌಧದ ಮೊದಲ ಮಹಡಿಯಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ‘ಅನುಭವ ಮಂಟಪ’ದ ತೈಲವರ್ಣ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಎಚ್ ಕೆ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು. ಇದೇ ವೇಳೆ ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌

ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಐತಿಹಾಸಿಕ ಕ್ಷಣ ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ‘ವಿಶ್ವದ ಮೊದಲ ಸಂಸತ್ತು’ ಎಂಬ ಹೆಗ್ಗಳಿಕೆಯ ‘ಅನುಭವ ಮಂಟಪ’ದ ಬೃಹತ್ ತೈಲವರ್ಣ ಚಿತ್ರ ಅನಾವರಣ ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಐತಿಹಾಸಿಕ ಕ್ಷಣವೆಂಬುದು ವಿಶೇಷ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read