ದಾವಣಗೆರೆ : ಬಿಸಿಯೂಟದ ಅನ್ನ ಸಾಂಬಾರ್ ನಲ್ಲಿ ಹುಳುಗಳು ಪತ್ತೆಯಾಗಿದ್ದು, ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ.
ದಾವಣಗೆರೆ ಜಿಲ್ಲೆಯ ಜಗಳೂರಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಅಕ್ಕಿ, ಹಾಗೂ ದಿನಸಿಯನ್ನ ಪರಿಶೀಲನೆ ಮಾಡದೇ ಸಿಬ್ಬಂದಿಗಳು ಅಡುಗೆ ಮಾಡಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೃಷವಶಾತ್ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ.
