ವಡೋದರಾದ ಕೋಟಂಬಿ ಬಿಸಿಎ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯ ಇಂದು ( ಫೆಬ್ರವರಿ 5 ) ನಡೆಯುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಆರ್‌ಸಿಬಿ ಆಡುವ ಬಳಗ: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನಾ (ನಾಯಕಿ), ಜಾರ್ಜಿಯಾ ವಾಲ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಂಕಾ ಪಾಟೀಲ್, ಲಾರೆನ್ ಬೆಲ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಲಿಜೆಲ್ ಲೀ (ವಿಕೆಟ್ ಕೀಪರ್), ಶಫಾಲಿ ವರ್ಮಾ, ಲಾರಾ ವೊಲ್ವಾರ್ಡ್, ಜೆಮಿಮಾ ರೊಡ್ರಿಗಸ್ (ನಾಯಕಿ), ಮರಿಜಾನ್ ಕ್ಯಾಪ್, ಚಿನೆಲ್ ಹೆನ್ರಿ, ನಿಕಿ ಪ್ರಸಾದ್, ಸ್ನೇಹ ರಾಣಾ, ಮಿನ್ನು ಮಣಿ, ಶ್ರೀ ಚಾರಣಿ, ನಂದನಿ ಶರ್ಮಾ

