HomeIndiaತನಿಖೆಗೆ ಸಮಯ ಕೋರಿದ ಸರ್ಕಾರ: ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ತನಿಖೆಗೆ ಸಮಯ ಕೋರಿದ ಸರ್ಕಾರ: ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ನವದೆಹಲಿ: ತನಿಖೆ ಪೂರ್ಣಗೊಳಿಸಲು ಜೂನ್ 15 ರವರೆಗೆ ಸರ್ಕಾರ ಸಮಯ ಕೋರಿದ್ದರಿಂದ ಕುಸ್ತಿಪಟುಗಳು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ.

ಸರ್ಕಾರ ಜೂನ್ 15 ರವರೆಗೆ ಸಮಯ ಕೋರಿದ ನಂತರ ಭಾರತ ಕುಸ್ತಿ ಫೆಡರೇಷನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯನ್ನು ಕುಸ್ತಿಪಟುಗಳು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಕುಸ್ತಿಪಟುಗಳು ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಐದು ಗಂಟೆಗಳ ಕಾಲ ಸಭೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.

ತನಿಖೆಯನ್ನು ಮುಕ್ತಾಯಗೊಳಿಸಲು ಸರ್ಕಾರವು ಜೂನ್ 15 ರವರೆಗೆ ಸಮಯ ಕೇಳಿದೆ. ಪ್ರತಿಭಟನೆ ಇನ್ನೂ ಮುಗಿದಿಲ್ಲ. ದೆಹಲಿ ಪೊಲೀಸರು ಮೇ 28 ರಂದು ಕುಸ್ತಿಪಟುಗಳ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುತ್ತಾರೆ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಸಿನ ಕುಸ್ತಿಪಟುಗಳನ್ನು ಒಳಗೊಂಡಂತೆ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಅವರ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ತನಿಖೆಗೆ ಸರ್ಕಾರ ಸಮಯ ಕೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular