ಇಂದು 454 ʻಪೊಲೀಸ್ ಕಾನ್ಸ್ ಟೇಬಲ್ʼ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್) (ಪುರುಷ & ಮಹಿಳಾ), (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್ಲಾಗ್-454 ಹುದ್ದೆಗಳಿಗೆ ಡಿ.10 ಇಂದು ಬೆಳಿಗ್ಗೆ 11 ರಿಂದ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಎರಡು ಗಂಟೆ ಮುಂಚಿತÀವಾಗಿ ಹಾಜರಾಗುವಂತೆ ತಿಳಿಸಲಾಗಿದೆ.

ಎಲ್ಲೆಲ್ಲಿ ನಡೆಯಲಿದೆ ಪರೀಕ್ಷೆ?

  • ಯಾದಗಿರಿ ಜಿಲ್ಲೆ
  • ರಾಯಚೂರು ಜಿಲ್ಲೆ
  • ಕೊಪ್ಪಳ ಜಿಲ್ಲೆ
  • ಬಳ್ಳಾರಿ ಜಿಲ್ಲೆ
  • ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರ
  • ಬೆಂಗಳೂರು ನಗರ
  • ಚಿತ್ರದುರ್ಗ
  • ದಾವಣಗೆರೆ
  • ಹಾವೇರಿ
  • ಬೀದರ್
  • ಕಲಬುರಗಿ ನಗರ
  • ಕಲಬುರಗಿ ಜಿಲ್ಲೆ

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read