HomeKarnatakaಇಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ಈ...

ಇಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು :  ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) (ಪುರುಷ) (ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ರಾಜ್ಯಾದ್ಯಂತ ಜನವರಿ 28 ರ ಇಂದು ಬೆಳಿಗ್ಗೆ 11 ಗಂಟೆಯಿಂದ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿ ಪಡಿಸಿದ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನಿಗದಿಪಡಿಸಲಾಗಿದ್ದು, ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ, ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು, ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ(ಚಪ್ಪಲಿ) ಯನ್ನು ಧರಿಸಿರಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ, ಕಡಗಗಳನ್ನು ಧರಿಸುವುದನ್ನು ನಿಷೇಧಿಸಿದೆ.

ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆ ವಹಿಸಿ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular