HomeKarnatakaಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್)(ಪುರುಷ ಮತ್ತು ಮಹಿಳಾ)(ತೃತೀಯ ಲಿಂಗಿ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-454 ಹುದ್ದೆಗಳಿಗೆ ಡಿಸೆಂಬರ್ 10 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗಳನ್ನು ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆ ಪತ್ರದ ಲಿಂಖ್ ಅನ್ನು ಸಹ ಕಳಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular