HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ವೈ.ಎಸ್.ಶರ್ಮಿಳಾ ರೆಡ್ಡಿ

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ವೈ.ಎಸ್.ಶರ್ಮಿಳಾ ರೆಡ್ಡಿ

ಬೆಂಗಳೂರು: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ.

ಏಕಾಏಕಿ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಶರ್ಮಿಳಾ ರೆಡ್ಡಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶರ್ಮಿಳಾ ಭೇಟಿಗೆ ಕಾರಣ ತಿಳಿದುಬಂದಿಲ್ಲ.

ಶರ್ಮಿಳಾ ರೆಡ್ಡಿ ಜನವರಿಯಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಶರ್ಮಿಳಾ ಪಕ್ಷ ಸೇರ್ಪಡೆ ಬಳಿಕ ಎ ಐಸಿಸಿ ಅವರನ್ನು ಆಂಧ್ರ ಪ್ಪ್ರದೇಶ ಕಾಂಗ್ರೆಸ್ ಘಟಕದ ಉಸ್ತುವಾರಿಯನ್ನಾಗಿ ನೇಮಕ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular