ಯಾದಗಿರಿ: ಸಹಾಯ ಮಾಡುವ ನೆಪದಲ್ಲಿ ಇಬ್ಬರು ರೈಲ್ವೆ ಪೊಲೀಸರು ಸೇರಿ ಆರು ಜನ ಆರೋಪಿಗಳು ವಿವಾಹಿತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ರೈಲ್ವೆ ಪೊಲೀಸರಿಬ್ಬರು ಸೇರಿ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಕೌಟುಂಬಿಕ ಕಲಹದ ಕಾರಣದಿಂದ ಬೇಸತ್ತು ಬೆಂಗಳೂರಿನಿಂದ ರೈಲಿನಲ್ಲಿ ಯಾದಗಿರಿಗೆ ಬಂದಿದ್ದ 22 ವರ್ಷದ ಮಹಿಳೆಗೆ ಪರಿಚಯವಾಗಿದ್ದ ಚಿಗರಹಳ್ಳಿಯ ಮಲ್ಲು ಅಲಿಯಾಸ್ ಮಲ್ಲಪ್ಪ ಹೊಸಮನಿ, ರೈಲ್ವೆ ಪೊಲೀಸ್ ಶರಣಪ್ಪ, ಮತ್ತೊಬ್ಬ ಆರೋಪಿ ರೈಲ್ವೆ ಪೊಲೀಸ್ ಸಿಬ್ಬಂದಿ, ಮಹೇಶ ಎಲ್ಲೇರಿ, ಆಕಾಶ್, ಹರ್ಷ ಎಂಬುವರು ಎರಡೂವರೆ ತಿಂಗಳಲ್ಲಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಲ್ಲು ಹಾಗೂ ಮಹೇಶ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಆಕಾಶ್ ಅಲಿಯಾಸ್ ಪಪ್ಪು, ಹರ್ಷ ಅಲಿಯಾಸ್ ಸುಧಾಕರ, ರೈಲ್ವೆ ಪೊಲೀಸ್ ಶರಣಪ್ಪ, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ವಿವಾಹಿತೆ ನೀಡಿದ ದೂರಿನ ಅನ್ವಯ ಪ್ರಕಾರ ದಾಖಲಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಎಸ್ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿ ರೈಲ್ವೆ ಪೊಲೀಸ್ ಶರಣಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಕರ್ತವ್ಯಕ್ಕೆ ಗೈರು ಹಾಕಿ ತಲೆ ಮರೆಸಿಕೊಂಡಿದ್ದಾನೆ. ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ರೈಲ್ವೆ ಪೊಲೀಸ್ ಠಾಣೆ ಪಿಎಸ್ಐ ರವಿರಾಜ್ ಚೌಹಾಣ್ ಮಾಹಿತಿ ನೀಡಿದ್ದಾರೆ.
ವಿಶೇಷ ಕಾರ್ಯಾಚರಣೆ; ಮೂವರು ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ
ಬಳ್ಳಾರಿ: ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ದುಡಿಯುತ್ತಿದ್ದ ಮೂವರು ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಕಾರ್ಮಿಕ ಆಯುಕ್ತರು ಹಾಗೂ ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ (ಚೈಲ್ಡ್ ಲೈನ್) ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.
ಕಾರ್ಯಾಚರಣೆಯ ವೇಳೆ ಪತ್ತೆಯಾದ ಮೂವರು ಬಾಲ ಮತ್ತು ಕಿಶೋರ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಿ, ಅವರ ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸಲಾಗುತ್ತಿದ್ದು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಅಂಗಡಿ/ಸAಸ್ಥೆಗಳ ಮಾಲೀಕರ ವಿರುದ್ಧ ಸಂಬAಧಪಟ್ಟ ಪೊಲೀಸ್ ಠಾಣೆಯಲ್ಲಿ ಕಾನೂನು ರೀತ್ಯಾ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಕೈನೂರ, ಎಪಿಎಂಸಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ, ಕಾರ್ಮಿಕ ನಿರೀಕ್ಷಕರಾದ ರಮೇಶ್ ಹಾಗೂ ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್, ರೀಚ್ ಸಂಸ್ಥೆಯ ಸಿಬ್ಬಂದಿ ಬಸಮ್ಮ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಚಂದ್ರಕಲಾ, ಅಕ್ಕಪಡೆಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

