BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ.

ಕಲಬುರ್ಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವು ಕಂಡಿದ್ದು, 7 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೀದರ್ -ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150-ಎ ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ 37 ಮಂದಿ ಪ್ರಯಾಣಿಸುತ್ತಿದ್ದರು. ಶಹಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read