BREAKING NEWS: 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ; ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಅಂಬೇಡ್ಕರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಾಗೇಶ್ ಹಾಗೂ ಚೆಟ್ಟಮ್ಮ ದಂಪತಿಯ 2 ತಿಂಗಳ ಹೆಣ್ಣುಮಗು ಮೀನಾಕ್ಷಿಯವನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ.

ಅಂಬೇಡ್ಕರ್ ಬಡಾವಣೆಯ ಹೊರಭಾಗದಲ್ಲಿರುವ ನಿರ್ಜನ ಪ್ರದೇಶದಲ್ಲಿರುವ ತೆರೆದ ಬಾವಿಗೆ ಮಗುವನ್ನು ಎಸೆಯಲಾಗಿದೆ. ಹೆಣ್ಣುಮಗು ಎಂಬ ಕಾರಣಕ್ಕೆ 2 ತಿಂಗಳ ಮಗುವನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ನಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read