HomeKarnatakaBREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹೈಯಾಳಪ್ಪ (11), ಶರಣಬಸವ (10 ಹಾಗೂ ಅನಿಲ (10) ಮೃತ ಬಾಲಕರು. ಈಜಲೆಂದು ಕೆರೆಗೆ ಇಳಿದಿದ್ದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೆರೆಯಿಂದ ಮೂವರು ಬಾಲಕರ ಮೃತದೇಹ ಹೊರತೆಗೆಯಲಾಗಿದೆ. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular