HomeLatest NewsBREAKING: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥ

BREAKING: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥ

ಯಾದಗಿರಿ: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಸುರಪುರದ ತಿಮ್ಮಾಪುರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಶಾಲೆಗೆ ವಿಶ್ವಗಂಗಾ ಎನ್ ಜಿಒದಿಂದ ಬಿಸಿಯೂಟ ಪೂರೈಕೆಯಾಗುತ್ತದೆ. ಹೀಗೆ ಪೂರೈಕೆಯಾಗ ಊಟದಲ್ಲಿ ಸತ್ತ ಹಲ್ಲಿ ಬಿದ್ದಿತ್ತು ಎನ್ನಲಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಐವರು ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಡ್ಲೂರ್ ಭೇಟ್ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular