HomeKarnatakaBIG NEWS: ಯಾದಗಿರಿ ಡಿಹೆಚ್ಒ ಸಸ್ಪೆಂಡ್

BIG NEWS: ಯಾದಗಿರಿ ಡಿಹೆಚ್ಒ ಸಸ್ಪೆಂಡ್

ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಡಿಹೆಚ್ಒ ಡಾ.ಪ್ರಭುಲಿಂಗ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಡಳಿತಾಧಿಕಾರಿ, ಪ್ರಭುಲಿಂಗ ಅವರನ್ನು ಅಮಾನತು ಮಾಡಿ ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಆದೇಶ ಹೊರಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಡಾ.ಪ್ರಭುಲಿಂಗ ಅವರ ಯಾದಗಿರಿಯ ಕಚೇರಿ, ಮನೆ, ಕಲಬುರ್ಗಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular