ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಬಳಿ ನಡೆದಿದೆ.
ಶೀಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿದೆ.
ಗುರು ಮಣಿಕಂಠ ಎಂಬುವವರಿಗೆ ಸೇರಿದ ಕಾಟನ್ ಮಿಲ್ ಇದಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ. 15 ಕೋಟಿ ಮೌಲ್ಯದ ಯಂತ್ರ, ಹತ್ತಿ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
