BIG NEWS : ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ : ಸ್ಪೋಟಕ ಭವಿಷ್ಯ ನುಡಿದ ಪೂಜಾರಿ.!

ಯಾದಗಿರಿ: ದುರ್ಗಾದೇವಿ ದೇವಸ್ಥಾನದ ಅರ್ಚಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ, ಕೇಂದ್ರ ಎನ್ ಡಿಎ ಸರ್ಕಾರ ಪತನವಾಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಅಷ್ಟೇ ಅಲ್ಲ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕವಿದೆ. ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ. ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಅರ್ಚಕ ಮಹದೇವಪ್ಪ ಪೂಜಾರಿ ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯವಾಣಿ ನುಡಿದಿದ್ದರು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.

ದೇವಿ ಕನಸಲ್ಲಿ ಬಂದು 9 ಜನ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಕೊನೆಗೆ ಇಬ್ಬರಿಗೆ ಸಿಎಂ ಸ್ಥಾನ ನೀಡಲು ಪ್ರೇರಣೆ ನೀಡಿದಳು. ಆಗ ನಾನು ಡಿ.ಕೆ.ಶಿವಕುಮಾರ್ ಅವರಿಗೆ ಹೂವಿನ ಹಾರ ಹಾಕು ಎಂದೆ. ಆದರೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಿದ್ದರು. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕಾಲ ಬಂದಿದೆ ಎಂದು ಅರ್ಚಕರು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read