HomeLatest NewsBREAKING: ಯಾದಗಿರಿಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದು...

BREAKING: ಯಾದಗಿರಿಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದು ಸಾವು

ಯಾದಗಿರಿ: ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ಹಲವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೊಹರಂ ಆಚರಣೆ ಸಂದರ್ಭದಲ್ಲೇ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಯಾದಗಿರಿ ತಾಲೂಕಿನ ಶೆಟ್ಟಿಕೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಳ್ಳೆಪ್ಪ ಪೂಜಾರಿ ಮೃತ ದುರ್ದೈವಿ. ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಹೃಫ಼್ದಯಾಘಾತದಿಂದ ಹಳ್ಳೆಪ್ಪ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular